Trending

ದೆಹಲಿಯಲ್ಲಿ ಸಿದ್ದರಾಮಯ್ಯ : ರಾಹುಲ್, ಖರ್ಗೆ ಭೇಟಿಯಾಗಿ ಚರ್ಚೆ

Spread the love

ಬೆಂಗಳೂರು/ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ಬಳಿಕ, ಶುಕ್ರವಾರ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್​ ಹೈಕಮಾಂಡ್​ ನಾಯರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಹೈಕಮಾಂಡ್ ಭೇಟಿಯಾಗಲು ದೆಹಲಿಗೆ ತೆರಳಿದ್ದಾರೆ. ಈ ವೇಳೆ ಸಿದ್ದರಾಮಯ್ಯ, ಮೊದಲಿಗೆ ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಲೋಕಸಭಾ ಪ್ರತಿಪಕ್ಷದ ನಾಯಕ ರಾಹುಲ್​ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿದರು.

ಬಳಿಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರು. ಖರ್ಗೆ ಅವರ ನಿವಾಸದಲ್ಲಿ ಕೆಲಹೊತ್ತು ಮಹತ್ವದ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಪುತ್ರ ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕರಾದ ಪ್ರಿಯಾಂಕ್​ ಖರ್ಗೆ, ಕೆ.ಜೆ.ಜಾರ್ಜ್​ ಇತರರು ಉಪಸ್ಥಿತರಿದ್ದರು.

[pj-news-ticker]