ವಿಜಯಪುರ: ಭೀಮಾ ತೀರದಲ್ಲಿ ಮತ್ತೊಂದು ಹತ್ಯಾಕಾಂಡ ನಡೆದಿದೆ. ನೆತ್ತರು ಮತ್ತೆ ಕೊಡಿಯಾಗಿ ಹರಿದಿದೆ. ಆರು ಜನರಿಗೆ ಗುಂಡಿಟ್ಟು, ಮಚ್ಚಿನಿಂದ ಕೊಚ್ಚಿ ಭೀಕರ ಹತ್ಯೆ ನಡೆಸಲಾಗಿದೆ.
ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಕೃತ್ಯಕ್ಕೆ ಜಮೀನು ವಿವಾದ ಶಂಕೆ ವ್ಯಕ್ತಪಡಿಸಲಾಗಿದೆ.
ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ, ಶಬ್ಬೀರ್ ನದಾಫ್ ಮೃತರು.
ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
