Trending

ಪರಿಷತ್​​ ಚುನಾವಣೆ ಫಲಿತಾಂಶ : ಕಾಂಗ್ರೆಸ್​​ನ​​ ಐವರು, ಬಿಜೆಪಿಯ ಇಬ್ಬರ ಗೆಲುವು, ಸೋಲುಂಡ ಜೆಡಿಎಸ್​​ನ ಗೋವಿಂದರಾಜು

Spread the love

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ.

ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಮತ್ತು ಜೆಡಿಎಸ್​​ನಿಂದ ಕ್ರಾಸ್​​ ವೋಟಿಂಗ್​​ ಆಗಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕಾಂಗ್ರೆಸ್​ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್​ಗೆ 32 ಮತಗಳು ಬಂದಿದ್ದರೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರ 14 ಮತಗಳು ಬಿದ್ದಿವೆ.

ಯಾವ್ಯಾವ ಅಭ್ಯರ್ಥಿಗೆ ಎಷ್ಟು ಮತ?

  • ಜೆಡಿಎಸ್ ಅಭ್ಯರ್ಥಿ ಗೋವಿಂದರಾಜುಗೆ 14 ಮತಗಳು
  • ಕಾಂಗ್ರೆಸ್​​ನ ಬಿ.ಕೆ. ಹರಿಪ್ರಸಾದ್​​ಗೆ 30 ಮತಗಳು
  • ಕಾಂಗ್ರೆಸ್​ನ ತಿಪ್ಪಣ್ಣಪ್ಪ ಕಮಕನೂರುಗೆ 30 ಮತಗಳು
  • ಕಾಂಗ್ರೆಸ್​ನ ಪಿ.ವಿ.ಮೋಹನ್​ಗೆ 29 ಮತಗಳು
  • ಕಾಂಗ್ರೆಸ್​ನ ಬಿ.ಎಸ್.ಶಿವಣ್ಣಗೆ 30 ಮತಗಳು
  • ಕಾಂಗ್ರೆಸ್​ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್​ಗೆ 32 ಮತ
  • ಬಿಜೆಪಿ ಅಭ್ಯರ್ಥಿ ಆರ್.ರಘುಗೆ 29 ಮತಗಳು
  • ಬಿಜೆಪಿ ಅಭ್ಯರ್ಥಿ ಲಿಂಗರಾಜು ಪಾಟೀಲ್​ಗೆ 27 ಮತಗಳು
[pj-news-ticker]