Breaking
Sat. Apr 20th, 2024

ಆರೋಗ್ಯದಲ್ಲಿ ಏರುಪೇರು: ನಟ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲು

By Mooka Nayaka News Apr 1, 2024
Spread the love

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರು ಸೋಮವಾರ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ. ನಗರದ ವೈದ್ಯೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಶಿವಮೊಗ್ಗ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದ ಶಿವಣ್ಣ ಭಾನುವಾರ ದೇವನಹಳ್ಳಿ ಬಳಿ ಸಿನಿಮಾವೊಂದರ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ಶೂಟಿಂಗ್ ಸಂದರ್ಭದಲ್ಲಿ ಸುಸ್ತು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ತೆರಳಿದ್ದಾರೆ. ಸೆಟ್ ನಲ್ಲಿನ ಧೂಳಿನ ಸಮಸ್ಯೆಯಿಂದಾಗಿ ಈ ರೀತಿಯ ಸಮಸ್ಯೆ ಉಂಟಾಗಿದ್ದು, ಒಂದು ದಿನ ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸೂಚನೆ ನೀಡಿದ್ದರಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.ಶಿವರಾಜ್ ಕುಮಾರ್ ಅವರಿಗೆ ಗಂಭೀರ ರೀತಿಯ ಅನಾರೋಗ್ಯ ಸಮಸ್ಯೆ ಎದುರಾಗಿಲ್ಲ. ನಾಳೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.ss

Related Post