ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪ್ರಜಾಪ್ರಭುತ್ವದ ಬಹುದೊಡ್ಡ ಗೆಲುವು ಎಂದು ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಹೇಳಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕಳೆದ ಸುಮಾರು ಎರಡು ತಿಂಗಳಿನಿಂದ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಈ ಮೂಲಕ ಕೊನೆಯಾಗುವ ನಿರೀಕ್ಷೆ ಹೆಚ್ಚಿದೆ. ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಬೆಂಬಲಿಸಿ ಸೋನಮ್ ವಾಂಗ್ಚುಕ್ ಅವರು 26 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದರು.
ಇದೀಗ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯ ಬಳಿಕ ಅವರು ಮೊದಲ ಪ್ರತಿಕ್ರಿಯೆ ನೀಡಿ, ಇದು ಪ್ರಜಾಪ್ರಭುತ್ವದ ವಿಜಯ ಎಂದು ಹೇಳಿದ್ದಾರೆ.
