Trending

ಶಿವಮೊಗ್ಗದ ಮಾಜಿ ಶಾಸಕ ಶರಣ ಹೆಚ್. ಎಂ. ಚಂದ್ರಶೇಖರಪ್ಪ ನಿಧನ

Spread the love

ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕರ್ನಾಟಕ ಮಾಜಿ ಶಾಸಕರ ವೇದಿಕೆಯ ಹಾಲಿ ರಾಜ್ಯಾಧ್ಯಕ್ಷರು ಹಾಗೂ ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಶರಣ ಹೆಚ್. ಎಂ. ಚಂದ್ರಶೇಖರಪ್ಪ ಅವರು ಇಂದು ಸಂಜೆ 6:15 ಗಂಟೆಗೆ ನಿಧನರಾದರು.

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ, ಸಾಮಾಜಿಕ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ.

ಅವರ ಪಾರ್ಥಿವ ಶರೀರವನ್ನು ನಾಳೆ ಬೆಳಗ್ಗೆ 9:30 ಗಂಟೆಯಿಂದ ಶಿವಮೊಗ್ಗ ನಗರದ ಬಸವನಗುಡಿ ಮುಖ್ಯ ರಸ್ತೆಯಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಗುತ್ತದೆ.

ಬಳಿಕ ಸಂಜೆ 4:00 ಗಂಟೆಗೆ ಹೊಸಳ್ಳಿಯಲ್ಲಿರುವ ಅವರ ತೋಟದಲ್ಲಿ ವೀರಶೈವ ಲಿಂಗಾಯತ ಸಮಾಜದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ.

ಶರಣ ಹೆಚ್. ಎಂ. ಚಂದ್ರಶೇಖರಪ್ಪ ಅವರ ನಿಧನಕ್ಕೆ ವಿವಿಧ ರಾಜಕೀಯ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ.

 

[pj-news-ticker]