Trending

ರಾಜ್ಯಕ್ಕೆ ಮತ್ತೆ ಹಿನ್ನಡೆ : ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸೂಚನೆ

Spread the love

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ.

ನವದೆಹಲಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಸಿಡಬ್ಲ್ಯೂಆರ್‌ಸಿ ಆದೇಶವನ್ನು ಸಿಡಬ್ಲ್ಯೂಎಂಎ ಎತ್ತಿ ಹಿಡಿದಿದ್ದು, ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ಹೊರಡಿಸಿದೆ.

ತಮಿಳುನಾಡಿಗೆ 15 ದಿನಗಳ ಕಾಲ ನಿರಂತರ ಪ್ರತಿನಿತ್ಯ 3500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರ (CWMA) ಆದೇಶ ಹೊರಡಿಸಿದೆ. ಸಭೆಯಲ್ಲಿ ಎಷ್ಟೇ ಪ್ರಬಲವಾಗಿ ವಾದ ಮಂಡನೆ ಮಾಡಿದರೂ ಕರ್ನಾಟಕಕ್ಕೆ ಯಾವುದೇ ಪ್ರಯೋಜನ ಆಗಿಲ್ಲ.

ಈಗಾಗಲೇ ತಮಿಳುನಾಡಿಗೆ ನೀರು ಹರಿಸದಂತೆ ಮಂಡ್ಯ ಮೈಸೂರು ಭಾಗದಲ್ಲಿ ರೈತರು ಹೋರಾಟ ಮಾಡುತ್ತಿದ್ದು, ಇದೀಗ ಸಿಡಬ್ಲ್ಯೂಎಂಎ ಆದೇಶದ ವಿರುದ್ಧ ರೈತರ ಪ್ರತಿಭಟನೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

[pj-news-ticker]