Trending

ವಿಧಾನ ಪರಿಷತ್‌ ಸ್ಪೀಕರ್‌ ಸ್ಥಾನಕ್ಕೆ ಬಸವರಾಜ ಹೊರಟ್ಟಿ ದಿಢೀರ್‌ ರಾಜೀನಾಮೆ

Spread the love

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಇಂದು ರಾಜೀನಾಮೆ ನೀಡಿದ್ದಾರೆ.

ಕರ್ನಾಟಕ ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಸಹಿ ಹಾಕಿದ್ದಾರೆ. ರಾಜೀನಾಮೆ ಕೊಡುವಂತೆ ಯಾವುದೇ ಒತ್ತಡ ಹೇರಲಾಗಿಲ್ಲ. ಸಿಎಂ ಜೊತೆ ಚರ್ಚಿಸಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಹೊರಟ್ಟಿ ಹೇಳಿದ್ದಾರೆ.

ಈ ಹಿಂದೆ ಆಗಸ್ಟ್‌ 14ಕ್ಕೆ ಹೊರಟ್ಟಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿತ್ತು. ಆಗಸ್ಟ್ 14 ರಂದು ಅಧಿವೇಶನದ ಎರಡನೇ ದಿನ ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ ನೆರವೇರಿದ ತಕ್ಷಣವೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರೇ ಖುದ್ದಾಗಿ ಹೇಳಿದ್ದರು. ಆದರೆ ಇದೀಗ ದಿಢೀರ್‌ ರಾಜೀನಾಮೆ ಘೋಷಿಸಿದ್ದಾರೆ.

 

[pj-news-ticker]