ಅಥಣಿ: ಅಥಣಿ ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಮುನಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷ ತೊರೆಯುವ ಬಗ್ಗೆ ಮಾತನಾಡಿದ್ದಾರೆ.
ಅಥಣಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಅಥಣಿ ಕ್ಷೇತ್ರದ ಮತದಾರರನ್ನು ನಂಬಿದವನು. ಪಕ್ಷ ನನಗೆ ಟಿಕೆಟ್ ನೀಡುವ ಭರವಸೆ ನೀಡಿತ್ತು. ಆದರೆ ನನಗೆ ಟಿಕೆಟ್ ನೀಡದೆ ಹೈಕಮಾಂಡ್ ದ್ರೋಹ ಮಾಡಿದೆ ಎಂದು ಹೇಳಿಕೆ ನೀಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಕಿಡಿ ಕಾರಿರುವ ಲಕ್ಷ್ಮಣ ಸವದಿ, ಮುಂದಿನ ದಿನದಲ್ಲಿ ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂಬ ಮಾತು ಹೇಳಿದ್ದಾರೆ.
ಕಾಗವಾಡ ಕಾಂಗ್ರೆಸ್ ಅಭ್ಯರ್ಥಿ, ರಾಜು ಕಾಗೆ ಅವರು ಅಥಣಿಯಲ್ಲಿರುವ ಲಕ್ಷ್ಮಣ ಸವದಿ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ರಾಜು ಕಾಗೆ -ಸವದಿ ಹಳೆಯ ಸ್ನೇಹಿತರು. ಸವದಿ ಕಾಂಗ್ರೆಸ್ ಸೇರ್ಪಡೆ ಆಗುತ್ತಾರಾ ಎಂಬ ಚರ್ಚೆ ಜೋರಾಗಿದೆ. ಒಟ್ಟಿನಲ್ಲಿ ಬೆಳಗಾವಿ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಷ ತೊರೆಯುತ್ತಾರಾ ಎಂದು ಕಾದು ನೋಡಬೇಕು.