ಕೋಲ್ಕತ್ತಾ : ಬಾಲಿವುಡ್ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಯಲ್ಲಿ ಸಣ್ಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ವೈದ್ಯರ ಪ್ರಕಾರ, ಇದು ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆಯಾಗಿದ್ದು, ಅವರ ದೇಹದಲ್ಲಿ ಈ ಹಿಂದೆ ಅಳವಡಿಸಲಾಗಿದ್ದ ಮೆಟಲ್ ಪ್ಲೇಟ್ನ್ನು ತೆಗೆದುಹಾಕಲಾಗಿದೆ. ಸದ್ಯ ಮಿಥುನ್ ಚಕ್ರವರ್ತಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಶುಭೇಂದು ಅಧಿಕಾರಿ ಮಿಥುನ್ ಚಕ್ರವರ್ತಿ ಅವರನ್ನು ಭೇಟಿಯಾಗಲು ಆಸ್ಪತ್ರೆಗೆ ತೆರಳಿದರು. ನಟನನ್ನು ಭೇಟಿಯಾಗಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ ಅವರು, ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ತಂಡದೊಂದಿಗೂ ಮಾತುಕತೆ ನಡೆಸಿ ಆರೋಗ್ಯದ ಮಾಹಿತಿ ಪಡೆದರು.
ಮಿಥುನ್ ಚಕ್ರವರ್ತಿ ಆಸ್ಪತ್ರೆಗೆ ದಾಖಲಾಗಿರುವುದು ಇದೇ ಮೊದಲ ಬಾರಿಯಲ್ಲ. 2024ರ ಫೆಬ್ರವರಿಯಲ್ಲಿ ಮೆದುಳಿನ ಪಾರ್ಶ್ವವಾಯು ಹಾಗೂ ಎದೆನೋವಿನ ಸಮಸ್ಯೆಯಿಂದ ಅವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಲೂ ಶುಭೇಂದು ಅಧಿಕಾರಿ ಆಸ್ಪತ್ರೆಗೆ ತೆರಳಿ ಮಿಥುನ್ ಚಕ್ರವರ್ತಿ ಅವರ ಆರೋಗ್ಯ ವಿಚಾರಿಸಿದ್ದರು.
