ತೀರ್ಥಹಳ್ಳಿ: ಎನ್ಐಎ ವಿಚಾರಣೆಗೆ ಸಂಬಂಧಪಟ್ಟಂತೆ ತೀರ್ಥಹಳ್ಳಿಯಲ್ಲಿ ಬಿಜೆಪಿ ನಗರ ಘಟಕದ ಮುಖಂಡನನ್ನು ಕರೆದಿರುವುದಾಗಿ ತಿಳಿದು ಬಂದಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ ಬೆಳ್ಳಂಬೆಳಿಗ್ಗೆ ಎನ್ಐಎ ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.
ಅದರ ಬೆನ್ನಲ್ಲೆ ತೀರ್ಥಹಳ್ಳಿಯ ಬಿಜೆಪಿಯ ಘಟಕದ ಮುಖಂಡನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಹಿಂದೆ ಮೊಬೈಲ್ ಅಂಗಡಿಯ ಇಬ್ಬರು ಯುವಕರನ್ನು ವಿಚಾರಣೆ ನಡೆಸಿದ್ದ ಎನ್ಐಎ ತಂಡ ಈ ಹುಡುಗರ ಜೊತೆ ನಗರ ಘಟಕದ ಮುಖಂಡ ಸಂಪರ್ಕ ಇದ್ದ ಕಾರಣ ವಿಚಾರಣೆಗೆ ಒಳಪಡಿಸಿರಬಹುದು ಎಂದು ಹೇಳಲಾಗುತ್ತಿದೆ.