ಶಿವಮೊಗ್ಗ: ಯುವಕನ ಕಿರುಕುಳದಿಂದ ಬೇಸತ್ತು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 17 ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಬಾಲಕಿಗೆ ಕಳೆದ ಒಂದು ವರ್ಷದಿಂದ ಸುಮುಖ್ (19) ಎಂಬ ಯುವಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಗೆ ಮೊಬೈಲ್ ಕೊಡಿಸಿದ್ದ ವಿಚಾರ ತಿಳಿದ ಪೋಷಕರು ಯುವಕನಿಗೆ ಬುದ್ಧಿವಾದ ಹೇಸಾಗರ : ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಸಾವುಳಿದ್ದರು. ಆದರೂ ಕಾಲೇಜಿಗೆ ತೆರಳುವಾಗ ಆಕೆಯನ್ನು ಹಿಂಬಾಲಿಸುತ್ತಿದ್ದ ಹಾಗೂ ಫೋಟೋ-ವಿಡಿಯೋ ಇದೆ ಎಂದು ಬೆದರಿಕೆ ಹಾಕುತ್ತಿದ್ದ ಎಂದು ಆರೋಪಿಸಲಾಗಿದೆ.
ಇದರಿಂದ ಮನನೊಂದ ಬಾಲಕಿ ಆಗಸ್ಟ್ 18ರಂದು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಆಕೆಯನ್ನು ಸಾಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಸುಮುಖ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
