Trending

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ

Spread the love

ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ರೂಪಾಯಿ ದುರ್ಬಳಕೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ನಾಗೇಂದ್ರ ವಿಪಕ್ಷಗಳ ಪ್ರತಿಭಟನೆಗೆ ಮಣಿದು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ನಾಗೇಂದ್ರ ರಾಜೀನಾಮೆ ಪತ್ರ ನೀಡಿದರು.

ನಾಗೇಂದ್ರ ರಾಜೀನಾಮೆಗೆ ಪಟ್ಟುಹಿಡಿದು ಬಿಜೆಪಿ ಹೋರಾಟ ತೀವ್ರಗೊಳಿಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕಾಂಗ್ರೆಸ್‌ ವರಿಷ್ಠ ನಾಯಕ ರಾಹುಲ್‌ ಗಾಂಧಿ ಅವರನ್ನು ಗುರುವಾರ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ್ದರು.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಹೋರಾಟ ನಡೆಸಿತ್ತು. ಪರಿಣಾಮವಾಗಿ, ಅಧಿವೇಶನ ಎರಡು ದಿನ ಮೊದಲೇ ಮೊಟಕುಗೊಂಡಿತ್ತು.

ಸೆ. 1ರಿಂದ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ನಾಯಕರು ಪ್ರಕಟಿಸಿದ್ದರು. ಇದರಿಂದಾಗಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿತ್ತು. ಇದೀಗ ಬಿ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ಸಲ್ಲಿಸಿದ್ದಾರೆ. ಹೀಗಾಗಿ ಮತ್ತೊಂದು ಸ್ಥಾನ ಖಾಲಿಯಾಗಲಿದೆ.

[pj-news-ticker]