Trending

ಹೊಸನಗರ : ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ

Spread the love

ಹೊಸನಗರ: ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆಗೆ ಶನಿವಾರ ಚಾಲನೆ ನೀಡಲಾಯಿತು.

ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆಯ ಅಧ್ಯಕ್ಷ ಆರ್.ಎಂ. ಮಂಜುನಾಥ್‌ಗೌಡ ಪಾದಯಾತ್ರೆಗೆ ಚಾಲನೆ ನೀಡಿದರು.

ಕಾರಣಗಿರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಎತ್ತಿನಗಾಡಿಯ ಮೇಲೆ ನಿಂತು ಕಸ್ತೂರಿರಂಗನ್ ವರದಿ ವಿರೋಧಿ ಪೋಸ್ಟರ್ ಪ್ರದರ್ಶಿಸುವ ಮೂಲಕ ಪಾದಯಾತ್ರೆ ಆರಂಭಿಸಲಾಯಿತು. ರೈತರು, ಕೃಷಿ ಕಾರ್ಮಿಕರು ಸೇರಿದಂತೆ ನೂರಾರು ಮಂದಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯಿಂದ ಮಲೆನಾಡಿನ ರೈತರು ಹಾಗೂ ಗ್ರಾಮೀಣ ಜನರ ಬದುಕಿನ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಸರ್ಕಾರದ ಗಮನ ಸೆಳೆಯುವುದು ಹೋರಾಟದ ಉದ್ದೇಶವಾಗಿದೆ.

 

[pj-news-ticker]