Trending

ಭದ್ರಾವತಿ: ಪೊಲೀಸ್ ಇಲಾಖೆಗೆ ನಾಲ್ಕು ವಾಹನ ಹಸ್ತಾಂತರಿಸಿದ ಶಾಸಕ ಸಂಗಮೇಶ್ವರ್

Spread the love

ಭದ್ರಾವತಿ: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಸಹಯೋಗದೊಂದಿಗೆ ಯೂನಿಯನ್ ಬ್ಯಾಂಕ್ ಸೋಷಿಯಲ್ ಫೌಂಡೇಷನ್ (ಯುಬಿಎಸ್‌ಎಫ್) ವತಿಯಿಂದ ಪೊಲೀಸ್ ಉಪವಿಭಾಗಕ್ಕೆ ನಾಲ್ಕು ವಾಹನಗಳನ್ನು ಮಂಗಳವಾರ ಹಸ್ತಾಂತರಿಸಲಾಯಿತು.

ಹಳೇನಗರದ ತಾಲೂಕು ಕಚೇರಿ ಹಾಗೂ ಮಿನಿ ವಿಧಾನಸೌಧದ ಹಿಂಭಾಗದಲ್ಲಿರುವ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಹಾಗೂ ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಅವರಿಗೆ ವಾಹನಗಳನ್ನು ಹಸ್ತಾಂತರಿಸಿ, ಹಸಿರು ನಿಶಾನೆ ತೋರಿಸುವ ಮೂಲಕ ಸೇವೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಿ.ಕೆ. ಸಂಗಮೇಶ್ವರ್, ನಗರದ ವಿವಿಧೆಡೆ ಸೂಕ್ಷ್ಮ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ಅನುದಾನ ಸೇರಿದಂತೆ ಪೊಲೀಸ್ ಇಲಾಖೆಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಎ.ಜಿ. ಕಾರಿಯಪ್ಪ, ನಗರಸಭೆ ಉಪಾಧ್ಯಕ್ಷ ಬಷೀರ್ ಅಹಮದ್, ಪೌರಾಯುಕ್ತ ಕೆ.ಎನ್. ಹೇಮಂತ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆಶಾಲತಾ, ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್. ಗಣೇಶ್, ಮೆಸ್ಕಾಂ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್. ಗೋಪಾಲ್, ನಗರಸಭೆ ಸದಸ್ಯರಾದ ಚನ್ನಪ್ಪ ಹಾಗೂ ಸುದೀಪ್ ಕುಮಾರ್, ಮುಖಂಡರಾದ ಬಿ.ಎಸ್. ಬಸವೇಶ್, ವೈ. ನಟರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಉಪವಿಭಾಗದ ಉಪ ಪೊಲೀಸ್ ಅಧೀಕ್ಷಕ ಪ್ರಕಾಶ್ ರಾಥೋಡ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಪೊಲೀಸ್ ನಗರ ವೃತ್ತ ನಿರೀಕ್ಷಕರು, ವಿವಿಧ ಠಾಣೆಗಳ ಉಪನಿರೀಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

[pj-news-ticker]