Breaking
Sun. Sep 8th, 2024

ಈಶ್ವರಪ್ಪಗೆ ಮೋದಿ ಫೋಟೋ ಬಳಕೆ ಮಾಡುವ ಅಧಿಕಾರವಿಲ್ಲ: ವಿಪಕ್ಷ ನಾಯಕ ಆರ್.ಅಶೋಕ್

By Mooka Nayaka News Apr 6, 2024
Spread the love

ಬೆಂಗಳೂರು: ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಈಶ್ವರಪ್ಪ ಅವರಿಗೆ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಫೋಟೋ ಬಳಕೆ ಮಾಡುವ ಅಧಿಕಾರವಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪಗೆ ಮೋದಿ ಫೋಟೋ ಬಳಕೆ ಮಾಡಿಕೊಳ್ಳುವ ಅಧಿಕಾರವಿಲ್ಲ. ಒಂದು ವೇಳೆ ಬಳಕೆ ಮಾಡಿದರೆ ಅದು ತಪ್ಪು. ಸರ್ಕಾರಿ ಕಾರ್ಯಕ್ರಮ ಆಗಿದ್ದರೆ ಪ್ರಧಾನಿ ಆಗಿರುವುದರಿಂದ ಮೋದಿ ಫೋಟೊ ಬಳಸಿಕೊಳ್ಳಬಹುದು. ಆದರೆ, ರಾಜಕೀಯವಾಗಿ ಚುನಾವಣೆ ವೇಳೆ‌ ಬಿಜೆಪಿಗೆ ಮಾತ್ರ ಮೋದಿ ಫೋಟೊ ಬಳಕೆಯ ಅಧಿಕಾರ ಇದೆ ಎಂದು ಹೇಳಿದ್ದಾರೆ.

ಈಶ್ವರಪ್ಪ ಅವರು ಅನಧಿಕೃತವಾಗಿ ಮೋದಿಯವರ ಫೋಟೋ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ನಾಮಪತ್ರ ಸಲ್ಲಿಸಿದ ಬಳಿಕ ಈ  ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Related Post