Trending

ಶಿಕಾರಿಪುರದಲ್ಲಿ ಸಾಯಿ ಗಾರ್ಮೆಂಟ್ಸ್ ಕಾರ್ಮಿಕರ ಪ್ರತಿಭಟನೆ

Spread the love

ಶಿಕಾರಿಪುರ : ಪಿಎಫ್, ಇಎಸ್‌ಐ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಹಾಗೂ ಪಿಎಫ್ ಹಣವನ್ನು ಕಾರ್ಮಿಕರಿಗೆ ಸೂಕ್ತ ಅವಧಿಯಲ್ಲಿ ಪಾವತಿಸಬೇಕು ಎಂದು ಆಗ್ರಹಿಸಿ ಸಾಯಿ ಗಾರ್ಮೆಂಟ್ಸ್‌ನ ಸಾವಿರಾರು ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಸಾಯಿ ಗಾರ್ಮೆಂಟ್ಸ್‌ನಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳ ವಿವಿಧ ತಾಲ್ಲೂಕುಗಳಿಂದ ಆಗಮಿಸಿ ಸುಮಾರು 3 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಲ್ಪ ವೇತನದಲ್ಲಿ ದುಡಿಯುತ್ತಿರುವ ಕಾರ್ಮಿಕರ ವೇತನದಿಂದ ಪ್ರತಿ ತಿಂಗಳು ಸುಮಾರು ₹2 ಸಾವಿರ ಪಿಎಫ್‌ಗಾಗಿ ಕಡಿತ ಮಾಡಲಾಗುತ್ತಿದೆ. ಆದರೆ ಈ ಹಣವನ್ನು ಹಿಂದಿನಂತೆ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದರು.

ಈ ಹಿಂದೆ ಪ್ರತಿ 45 ದಿನಗಳಿಗೊಮ್ಮೆ ಪಿಎಫ್ ಹಣ ಪಡೆಯಲು ಅವಕಾಶವಿತ್ತು. ಇದೀಗ ಮೂರು ತಿಂಗಳು, ವರ್ಷಕ್ಕೊಮ್ಮೆ ಅಥವಾ ಮೂರು ವರ್ಷಗಳಿಗೊಮ್ಮೆ ಪಾವತಿಸಲಾಗುವುದು ಎಂದು ತಿಳಿಸಲಾಗುತ್ತಿದೆ. ಇದರಿಂದ ಅಲ್ಪ ವೇತನದಲ್ಲಿ ಜೀವನ ನಡೆಸುತ್ತಿರುವ ಕಾರ್ಮಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ಗಾರ್ಮೆಂಟ್ಸ್ ಎದುರು ಪ್ರತಿಭಟನೆ ನಡೆಸಿದ ಕಾರ್ಮಿಕರು ಬಳಿಕ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದರು. ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

[pj-news-ticker]