Trending

ಅ.2ಕ್ಕೆ ಹೆಚ್.ಎಂ. ಚಂದ್ರಶೇಖರಪ್ಪ ಶಿವಗಣಾರಾಧನೆ : ಹೆಚ್.ಸಿ. ಯೋಗೀಶ್

Spread the love

ಶಿವಮೊಗ್ಗ: ಮಾಜಿ ಶಾಸಕ ದಿ. ಹೆಚ್.ಎಂ. ಚಂದ್ರಶೇಖರಪ್ಪ ಅವರ ಶಿವಗಣಾರಾಧನೆ ಹಾಗೂ ಸರ್ವಶರಣ ಸಮ್ಮೇಳನವನ್ನು ಅ.2ರಂದು ಬೆಳಿಗ್ಗೆ 10.30ಕ್ಕೆ ಸಾಗರ ರಸ್ತೆಯ ಗಾಡಿಕೊಪ್ಪದ ಲಗಾನ್ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಸಿ. ಯೋಗೀಶ್ ತಿಳಿಸಿದರು.

ಮಂಗಳವಾರ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 26ರಂದು ಚಂದ್ರಶೇಖರಪ್ಪ ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕೃಷಿ ಕುಟುಂಬದಲ್ಲಿ ಜನಿಸಿದ ಚಂದ್ರಶೇಖರಪ್ಪ ಅವರು ರಾಜಕೀಯ ಪ್ರವೇಶಿಸಿ, ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಎಲ್ಲ ಸಮುದಾಯಗಳೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ಅವರು, ಪಕ್ಷದ ಸಂಘಟನೆಗೆ ತಮ್ಮದೇ ಕೊಡುಗೆ ನೀಡಿದ್ದರು ಎಂದು ಯೋಗೀಶ್ ಹೇಳಿದರು.

ಕಾರ್ಯಕ್ರಮಕ್ಕೆ ಸಿರಿಗೆರೆಯ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸುತ್ತೂರಿನ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹಾಗೂ ಆನಂದಪುರದ ಶ್ರೀ ಮುರುಘಾ ಮಠ–ಬೆಕ್ಕಿನ ಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.

ವಿವಿಧ ಮಠಗಳ ಸ್ವಾಮೀಜಿಗಳು, ಧಾರ್ಮಿಕ ಮುಖಂಡರು ಹಾಗೂ ವಿವಿಧ ಧರ್ಮಗಳ ಪ್ರತಿನಿಧಿಗಳು ಭಾಗವಹಿಸಲಿದ್ದು, ಖ್ಯಾತ ಹಿಂದೂಸ್ಥಾನಿ ಗಾಯಕ ಶರಣ ಹುಮಾಯೂನ್ ಹರ್ಲಾಪುರ ಅವರಿಂದ ವಚನ ಗಾಯನ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಡಿ.ಹೆಚ್. ಶಂಕರಮೂರ್ತಿ, ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಕೆ.ಎಸ್. ಈಶ್ವರಪ್ಪ, ಎಸ್.ಎನ್. ಚನ್ನಬಸಪ್ಪ, ಆರಗ ಜ್ಞಾನೇಂದ್ರ, ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಯೋಗೀಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನ ಕುಮಾರ್, ಇಸ್ಮಾಯಿಲ್ ಖಾನ್, ಮಧು, ಜ್ಯೋತಿ ಅರಳಪ್ಪ, ಶಿವಪ್ಪ ಹಾಗೂ ಶಿವಕುಮಾರ್,

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಆರ್. ಪ್ರಸನ್ನ ಕುಮಾರ್, ಇಸ್ಮಾಯಿಲ್ ಖಾನ್, ಮಧು, ಜ್ಯೋತಿ ಅರಳಪ್ಪ, ಶಿವಪ್ಪ ಹಾಗೂ ಶಿವಕುಮಾರ್, ಕಾಂಗ್ರೆಸ್ ಮುಖಂಡ ಎಸ್.ಪಿ. ದಿನೇಶ್ ಉಪಸ್ಥಿತರಿದ್ದರು.

 

[pj-news-ticker]