ಶಿವಮೊಗ್ಗ: ಕ್ಷೇತ್ರದಲ್ಲಿ ಅತ್ಯಂತ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ. ಅನೇಕ ಸಾಹಿತಿ ಮುಖ್ಯಮಂತ್ರಿಗಳಿದ್ದ ಕ್ಷೇತ್ರ. ನಮ್ಮ ದೌರ್ಭಾಗ್ಯ ಅಭಿವೃದ್ಧಿ ಬಗ್ಗೆ ಚರ್ಚೆ ಆಗದೆ, ವೈಯಕ್ತಿಕ ಟೀಕೆ ನಡೆಯುತ್ತಿದೆ. ಕೈಲಾಗದ ವಿಪಕ್ಷದ ನಾಯಕರ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಟೀಕಿಸಿದರು.
ಸುದ್ದಿಗಾರರೊಂದಿವಿಪಕಗೆ ಮಾತನಾಡಿದ ಅವರು, ಅವರಿಗೆ ಪ್ರಚಾರ ಮಾಡಲು ಯಾವುದೇ ವಿಚಾರ ಇಲ್ಲ. ಹೀಗಾಗಿಯೇ ವಿಪಕಅಪಪ್ರಚಾರ ಮಾಡುತ್ತಿದ್ದಾರೆ. ಈ ದೇಶದಲ್ಲಿ, ರಾಜ್ಯದಲ್ಲಿ ಆಡಳಿತ ಮಾಡಿದವರು ನೀವು. ಕುಮಾರಸ್ವಾಮಿ, ಯಡಿಯೂರಪ್ಪ ಸಮ್ಮಿಶ್ರ ಸರಕಾರ ಇದ್ದಾಗ ಸಾಕಷ್ಟು ಅಭಿವೃದ್ಧಿ ಆಗಿದೆ ಎಂದರು.
ಚಿತ್ರದುರ್ಗದಲ್ಲಿ ಮಠದಲ್ಲಿ ಪ್ರಚಾರ ಮಾಡಿದ್ದೆ ಎಂದು ಚುನಾವಣಾ ನೀತಿ ಸಂಹಿತೆ ದೂರು ದಾಖಲಾಗಿತ್ತು. ಈ ಸಂಬಂಧ ಪ್ರಕರಣ ರದ್ದು ಮಾಡುವಂತೆ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದೇನೆ. ಶಿವಮೊಗ್ಗ ಜನತೆ ಮೋದಿ ಕೈ ಬಲಪಡಿಸುತ್ತಾರೆ ಎಂದರು.
ಶಿಕಾರಿಪುರದಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಚಾರ ಮಾಡುತ್ತಾರೆ. ಶಿಕಾರಿಪುರದ ಜನತೆ ಪುರಸಭೆ ಸದಸ್ಯನಾಗಿದ್ದವನನ್ನು ಸಂಸತ್ ಸದಸ್ಯನಾಗಿ ಮಾಡಿದ್ದಾರೆ. 8 ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಅಧಿಕ ಮತಗಳನ್ನು ಪಡೆಯುತ್ತೇನೆ ಎಂದರು.