ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಹೊತ್ತಲ್ಲೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ವೀರಪ್ಪ ಮೊಯ್ಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹೈಕಮಾಂಡ್ ಕೊನೆ ಕ್ಷಣದಲ್ಲಿ ವೀರಪ್ಪ ಮೊಯ್ಲಿ ಬದಲಿಗೆ ಯುವ ನಾಯಕ ರಕ್ಷಾ ರಾಮಯ್ಯಗೆ ನೀಡಿತ್ತು. ಇದರಿಂದ ನಿರಾಸೆಗೊಂಡಿರುವ ಮೊಯ್ಲಿ ಇದೀಗ ಅಂತಿಮವಾಗಿ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು ರಕ್ಷಾ ರಾಮಯ್ಯಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
ಇನ್ನು ಚಿಕ್ಕಬಳ್ಳಾಪುರದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಡಾ. ಕೆ ಸುಧಾಕರ್ ಸ್ಪರ್ಧಿಸುತ್ತಿದ್ದಾರೆ. ಇನ್ನು ಎನ್ ಡಿಎ ಮೈತ್ರಿಕೂಟ ಹಾಗೂ ಕಾಂಗ್ರೆಸ್ ನಲ್ಲೂ ಆಂತರಿಕ ಕಚ್ಚಾಟಗಳು ನಡೆಯುತ್ತಿರುವುದರಿಂದ ಈ ಚಿಕ್ಕಬಳ್ಳಾಪುರದಲ್ಲಿ ಗೆಲ್ಲುವ ಅಭ್ಯರ್ಥಿ ಯಾರು ಎಂಬ ನಿರೀಕ್ಷೆ ಹೆಚ್ಚಿಸಿದೆ.