ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್,ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬಸ್ ಚಾಲಕ ಹಾಗೂ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೃತರನ್ನು ಬಸ್ ಚಾಲಕ ಬಾಪು ಪಾಟೀಲ್ (36) ಹಾಗೂ ಪ್ರಯಾಣಿಕ ಗಗನ್(14) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಓರ್ವ ಗಾಯಾಳು ಪ್ರಯಾಣಿಕ ರಾಜು ನಾಯ್ಕ ಅವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಂಬುಲೆನ್ಸ್ನಲ್ಲಿ ದಾವಣಗೆರೆ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
