ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಸಿಎಂ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಮ್ಮ ಅರೆಸ್ಟ್ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.
ಹೌದು.. ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೀಡಾಗಿದ್ದ ಅರವಿಂದ್ ಕೇಜ್ರಿವಾಲ್ ಮತ್ತೊಂದುಷ್ಟು ದಿನ ಜೈಲಿನಲ್ಲೇ ಕಾಲ ಕಳೆಯಬೇಕಿದ್ದು, ಬಂಧನ ವಿರೋಧಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಅರ್ಜಿಯಲ್ಲಿ ಕೇಜ್ರಿವಾಲ್, ತಮ್ಮ ಬಂಧನ “ಸಮರ್ಥನೀಯವಲ್ಲ”.. ಪಿತೂರಿ ಮಾಡಿದ ಸಾಕ್ಷ್ಯಗಳ ಮೂಲಕ ಬಂಧಿಸಲಾಗಿದೆ ಎಂದು ಕೇಜ್ರಿವಾಲ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಆದರೆ ಕೇಜ್ರಿವಾಲ್ ಆರೋಪವನ್ನು ಒಪ್ಪದ ಕೋರ್ಟ್ ಅರ್ಜಿ ತಿರಸ್ಕರಿಸಿದೆ.
ಇಡಿ ಸಂಗ್ರಹಿಸಿದ ವಿಷಯವು ಅರವಿಂದ್ ಕೇಜ್ರಿವಾಲ್ ಇತರರೊಂದಿಗೆ ಪಿತೂರಿ ನಡೆಸಿರುವುದನ್ನು ಬಹಿರಂಗಪಡಿಸುತ್ತದೆ. ಗೋವಾ ಚುನಾವಣೆಯಲ್ಲಿ ಹವಾಲಾ ಹಣ ಬಳಕೆಯಾಗಿದೆ ಎಂಬುದಕ್ಕೆ ಜಾರಿ ನಿರ್ದೇಶನಾಲಯ ಸಾಕ್ಷ್ಯಾಧಾರಗಳನ್ನು ನೀಡಿದೆ. ಹೀಗಾಗಿ ಕೇಜ್ರಿವಾಲ್ ಬಂಧನ ಕಾನೂನಿಗೆ ವಿರುದ್ಧವಾಗಿಲ್ಲ, ರಿಮಾಂಡ್ ಅನ್ನು ಅಕ್ರಮ ಎಂದು ಕರೆಯಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.