Trending

ಶಿಕಾರಿಪುರ: ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೆಬಲ್ ಸಾವು

Spread the love

ಶಿಕಾರಿಪುರ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯ ಕಾನ್ಸ್‌ಟೆಬಲ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರನ್ನು ಶಿಕಾರಿಪುರ ತಾಲೂಕಿನ ಸಾಲೂರು ಗ್ರಾಮದ ಗಿರೀಶ್ ಕುಮಾರ್ (33) ಎಂದು ಗುರುತಿಸಲಾಗಿದೆ.

ಸುಮಾರು ಎರಡು ವಾರಗಳ ಹಿಂದೆ ಶಿಕಾರಿಪುರ ತಾಲೂಕಿನ ಚಿಕ್ಕಾಪುರ ಕ್ರಾಸ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಿರೀಶ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು.

ಅವರನ್ನು ಮೊದಲು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಕ್ಟೋಬರ್ 28ರಂದು ಕೊನೆಯುಸಿರೆಳೆದಿದ್ದಾರೆ.

ಅಕ್ಟೋಬರ್ 29ರಂದು ಮೃತರ ಸ್ವಗ್ರಾಮ ಸಾಲೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

[pj-news-ticker]