ತೀರ್ಥಹಳ್ಳಿ: ತಾಲೂಕಿನ ಆರಗದ ಮರಗಳಲೆಯ ಹರೀಶ್ ಮತ್ತು ಲತಾ ದಂಪತಿಗಳ ಪುತ್ರ ಹರ್ಷಿತ್ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಗಳಿಸಿದ್ದಾನೆ.
ಪ್ರೌಢಶಾಲಾ ವಿದ್ಯಾಭ್ಯಾಸವನ್ನು ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ 8ರಿಂದ 10ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.