ನವದೆಹಲಿ : ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊಲೆ ಬೆದರಿಕೆ ಬಂದಿದೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಕರೆ ಮಾಡಿರುವ ವ್ಯಕ್ತಿಯೊಬ್ಬ 7 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಹಣ ನೀಡದಿದ್ದರೆ ಕೇಜ್ರಿವಾಲ್ ಮತ್ತು ಅವರ ಪುತ್ರಿ ಹರ್ಷಿತಾ ಕೇಜ್ರಿವಾಲ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಪಂಜಾಬ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
7 ಕೋಟಿ ರೂಪಾಯಿ ಬೇಡಿಕೆ : ನವೆಂಬರ್ 6ರಂದು ಪಂಜಾಬ್ನ ಮೊಹಾಲಿ ಪೊಲೀಸರಿಗೆ ಆಮ್ ಆದ್ಮಿ ಪಕ್ಷದ ತಿಲಕ್ ನಗರ ಶಾಸಕ ಜರ್ನೈಲ್ ಸಿಂಗ್ ದೂರು ನೀಡಿದ್ದಾರೆ.
ವಿದೇಶಗಳಲ್ಲಿ ಸಂಪರ್ಕ ಹೊಂದಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸದಸ್ಯ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ತಮಗೆ ಕರೆ ಮಾಡಿದ್ದಾನೆ. ವಾಟ್ಸ್ಆ್ಯಪ್ ಮೂಲಕವೂ ಬೆದರಿಕೆ ಸಂದೇಶ ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
