Trending

ಶಿವಮೊಗ್ಗ ತಿಲಕ್ ನಗರದಲ್ಲಿ ಗ್ಯಾಲಘರ್ ಕಂಪನಿ ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್ : ಸಾರ್ವಜನಿಕರಿಗೆ ತೊಂದರೆ – ಸೂಕ್ತ ಕ್ರಮಕ್ಕೆ ಆಗ್ರಹ

Spread the love

ಶಿವಮೊಗ್ಗ: ನಗರದ ತಿಲಕ್ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ರಸ್ತೆಯಲ್ಲಿ ಕಾರ್ಯಾರಂಭಿಸಿರುವ ಗ್ಯಾಲಘರ್ (Gallagher) ಕಂಪನಿಯ ವಾಹನಗಳ ಅಡ್ಡಾದಿಡ್ಡಿ ನಿಲುಗಡೆಯಿಂದ ಸ್ಥಳೀಯ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಕಂಪನಿಯ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಇದ್ದರೂ ನಿಗದಿತ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸದೆ ಮನೆಗಳ ಮುಂಭಾಗದಲ್ಲಿ ನಿಲ್ಲಿಸಲಾಗುತ್ತಿದೆ. ಇದರಿಂದ ನಿವಾಸಿಗಳ ಓಡಾಟಕ್ಕೆ ಅಡ್ಡಿಯಾಗುತ್ತಿದ್ದು, ಸಾರ್ವಜನಿಕರ ಸಂಚಾರಕ್ಕೂ ಸಮಸ್ಯೆ ಉಂಟಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಬಗ್ಗೆ ಪ್ರಶ್ನಿಸುವ ನಿವಾಸಿಗಳೊಂದಿಗೆ ವಾಹನ ಚಾಲಕರು ಹಾಗೂ ಸಿಬ್ಬಂದಿ ವಾಗ್ವಾದಕ್ಕೆ ಇಳಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಂಪನಿಯ ಆಡಳಿತ ಮಂಡಳಿ ತನ್ನ ಸಿಬ್ಬಂದಿಗೆ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚಿಸಬೇಕು. ಅಲ್ಲದೆ, ವಾಹನಗಳನ್ನು ನಿಗದಿತ ಪಾರ್ಕಿಂಗ್ ಸ್ಥಳದಲ್ಲಿಯೇ ನಿಲ್ಲಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸ್ಥಳೀಯ ನಿವಾಸಿಗಳ ನೆಮ್ಮದಿ, ಸಾರ್ವಜನಿಕರ ಸಂಚಾರ ಹಾಗೂ ಮನೆಗಳ ಮುಂಭಾಗದ ಪ್ರವೇಶಕ್ಕೆ ತೊಂದರೆಯಾಗದಂತೆ ಕಂಪನಿಯ ಆಡಳಿತ ಮಂಡಳಿ ಕೂಡಲೇ ಗಮನಹರಿಸಬೇಕು.

ಸಾರ್ವಜನಿಕರಿಗೆ ಅನಗತ್ಯ ತೊಂದರೆ ನೀಡದೆ ನಿಯಮಬದ್ಧವಾಗಿ ವಾಹನ ನಿಲುಗಡೆ ಮಾಡುವ ಜವಾಬ್ದಾರಿಯನ್ನು ಕಂಪನಿ ನಿರ್ವಹಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

[pj-news-ticker]