Trending

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಮಗ ಯತೀಂದ್ರಗೆ ಬೆಂಬಲಿಸಿ: ಸಿದ್ದರಾಮಯ್ಯ

Spread the love

ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ 80 ವರ್ಷ ವಯಸ್ಸಾಗಿರುವುದರಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಇಲ್ಲ ಎಂದು ತಿಳಿಸಿದ್ದಾರೆ.

ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಸಂವಿಧಾನ ದಿನಾಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿಮಾನಿಗಳು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ವಯಸ್ಸಿನ ಕಾರಣದಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.

ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಆರನೇ ಸಾಲಿನಲ್ಲಿ ಕುಳಿತಿದ್ದ ಬಗ್ಗೆ ನಡೆಯುತ್ತಿರುವ ಚರ್ಚೆಗೂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಕಾರ್ಯಕ್ರಮಕ್ಕೆ ತಡವಾಗಿ ತೆರಳಿದ್ದರಿಂದ ಹಿಂದಿನ ಸಾಲಿನಲ್ಲಿ ಕುಳಿತುಕೊಳ್ಳಬೇಕಾಯಿತು ಎಂದು ತಿಳಿಸಿದರು.

2028ರ ಚುನಾವಣೆಯಲ್ಲಿ ಯತೀಂದ್ರಗೆ ಬೆಂಬಲಿಸಿ: ವರುಣ ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ಮನವಿ

ಇದೇ ವೇಳೆ, ವರುಣ ಕ್ಷೇತ್ರದ 2028ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಯತೀಂದ್ರ ಅವರಿಗೆ ಬೆಂಬಲ ನೀಡುವಂತೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಬುಧವಾರ ವರುಣ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ತಾವು ಸ್ಪರ್ಧಿಸಲು ಸಾಧ್ಯವಾಗದಿದ್ದರೆ ತಮ್ಮ ಪುತ್ರ ಯತೀಂದ್ರಗೆ ಸಹಕಾರ ಮತ್ತು ಬೆಂಬಲ ನೀಡಬೇಕು. ಅವರಿಗೆ ಆಶೀರ್ವಾದ ಮಾಡಬೇಕು ಎಂದು ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ.

ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

[pj-news-ticker]