ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರ ಹುಟ್ಟುಹಬ್ಬದ ಅಂಗವಾಗಿ ಅನವೇರಿಯ ಹಿರಿಮಾವು ರದಮ್ಮ ಸಭಾಭವನದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಶಾಸಕಿ ಶಾರದಾ ಪೂರ್ಯಾನಾಯ್ಕ್ ಭೇಟಿ ನೀಡಿದ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಜೆಡಿಎಸ್ ಮುಖಂಡರು ಕೇಕ್ ಕತ್ತರಿಸುವ ಮೂಲಕ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಹಿರಿಯ ಮುಖಂಡರಾದ ಎಂ.ಜಿ. ನಾಗರಾಜ್, ಆಂಜನೇಯ ಇಟಿಗೆಹಳ್ಳಿ, ಹೇಮಂತ್ ಕುಮಾರ್, ಉಮೇಶ್, ಮಲ್ಗೇನಹಳ್ಳಿ ಅಜ್ಜಯ್ಯ, ಆನಂದ್, ಮಣಿ,ರುದ್ರೇಶ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
