ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್, ಎರಡು ವಾರಗಳೊಳಗೆ ಸೆಷನ್ಸ್ ನ್ಯಾಯಾಲಯಕ್ಕೆ ಶರಣಾಗುವಂತೆ ವಿನಯ್ ಕುಲಕರ್ಣಿಗೆ ಸೂಚಿಸಿದೆ.
ಡಾ. ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ.
ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಈ ಹಿಂದೆ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಕೊಲೆಯಾದ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ನೀಡಿದ್ದ ಜಾಮೀನು ಹಾಗೂ ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಿದೆ.
