Trending

ಶಿವಮೊಗ್ಗ ಬಂಡಾಯ ಅಭ್ಯರ್ಥಿಯಾಗಿ ನಾಳೆ ಈಶ್ವರಪ್ಪ ನಾಮಪತ್ರ ಸಲ್ಲಿಕೆ!

Spread the love

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಬಿಜೆಪಿಯು ತಮ್ಮ ಪುತ್ರನಿಗೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಬಂಡಾಯ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇನೆ, ನಾಳೆ ಬೆಳಗ್ಗೆ 10 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಗೋಪಿ ವೃತ್ತಕ್ಕೆ ಬಂದು ಸಭೆ ನಡೆಸಲಾಗುವುದು. ನಂತರ ನಾಮಪತ್ರ ಸಲ್ಲಿಸಲಾಗುವುದು. ಬೈಂದೂರು ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಲ್ಲಾ ಕಡೆಗಳಿಂದ ರಾಷ್ಟ್ರಭಕ್ತರು ಬರಲಿದ್ದಾರೆ ಎಂದರು.

ನನ್ನ ಅಭಿಮಾನಿಗಳು ನಿರೀಕ್ಷೆ ಮೀರಿ ಕೆಲಸ ಮಾಡ್ತಿದ್ದಾರೆ. ಸೋಲಿನ ಭಯದಲ್ಲಿ ಅಪಪ್ರಚಾರ ಆಗ್ತಿದೆ. ಈಶ್ವರಪ್ಪ ವಾಪಸ್ ತಗೋತಾರೆ ಯಾಕೆ ಬೆಂಬಲ ಕೊಡ್ತೀರಾ ಅಂತಿದ್ದಾರೆ. ಅಪಪ್ರಚಾರಕ್ಕೆ ಕಾರ್ಯಕರ್ತರು ಕಿವಿಗೊಡಬಾರದು. ನಾನು ನಿಂತೇ ನಿಲ್ಲುತ್ತೇನೆ ಇದರಲ್ಲಿ ಯಾವುದೇ ಅನುಮಾನ ಇಲ್ಲ. ವ್ಯವಸ್ಥಿತವಾಗಿ ಚುನಾವಣಾ ಪ್ರಚಾರ ಆಗ್ತಿದೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಕಾರ್ಯಕರ್ತರು ಅನೇಕರು ನೇರವಾಗಿ ಬೆಂಬಲ ಕೊಡ್ತಿದ್ದಾರೆ. ಗೆಲ್ಲಿಸುವ ದಿಕ್ಕಿನಲ್ಲಿ ಪ್ರಯತ್ನ ಮಾಡ್ತೇವೆ ಅಂತಿದ್ದಾರೆ. ಕಾಂಗ್ರೆಸ್-ಜೆಡಿಎಸ್ ನವರು ಬೆಂಬಲ ಕೊಡ್ತಿದ್ದಾರೆ. ಕಾಂಗ್ರೆಸ್ ಕ್ಯಾಂಡಿಡೇಟು ವೀಕ್ ಅದಕ್ಕೆ ನಿಮಗೆ ಬೆಂಬಲ ಕೊಡ್ತೀವಿ ಅಂತಿದ್ದಾರೆ. ನಾಳೆ ಎಲ್ಲರೂ ನಾಮಪತ್ರ ಸಲ್ಲಿಸಲು ಬರುತ್ತಿದ್ದಾರೆ. ಇಷ್ಟರಮಟ್ಟಿಗೆ ಬೆಂಬಲ ಸಿಗುತ್ತದೆ ಅಂತಾ ನಾನು ನಿರೀಕ್ಷೆ ಮಾಡಿರಲಿಲ್ಲ ಎಂದು ಈಶ್ವರಪ್ಪ ಹೇಳಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಪ್ರವಾಸ ಮುಗಿಸಿದ್ದೇವೆ. ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಿರುವ ಹಿಂದುತ್ವವಾದಿ ಈಶ್ವರಪ್ಪ ಅವರಿಗೆ ಬೆಂಬಲ ಕೊಡ್ತಿದ್ದಾರೆ ಎಂದು ರಾಷ್ಟ್ರಭಕ್ತ ಬಳಗದ ಸದಸ್ಯ ಇ. ವಿಶ್ವಾಸ್ ತಿಳಿಸಿದ್ದಾರೆ. ಈಶ್ವರಪ್ಪ ಅವರ ಜೊತೆಗೆ ಏಕೆ ಹೋಗ್ತಿದ್ದಾರಾ ಎಂದು ಹಲವರು ಕೇಳ್ತಿದ್ದಾರೆ. ಈಶ್ವರಪ್ಪ ಅವರಿಗೆ ಅನ್ಯಾಯವಾಗಿದೆ.ಹೀಗಾಗಿ ಅವರ ಬೆಂಬಲಕ್ಕೆ ನಿಲ್ಲುತ್ತಿದ್ದೇವೆ ಎಂದಿದ್ದಾರೆ.

 

[pj-news-ticker]