Trending

ನಾಮಪತ್ರ ಸಲ್ಲಿಸಿದ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ

Spread the love

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಪತ್ನಿ ಜಯಲಕ್ಷ್ಮಿ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಪಾಲಿಕೆ ಸದಸ್ಯ ವಿಶ್ವಾಸ್ ಉಪಸ್ಥಿತರಿದ್ದರು.

ಒಂದೇ ದಿನ ಎರಡನೇ ಬಾರಿಗೆ ಈಶ್ವರಪ್ಪನವರಿಂದ ಉಮೇದುವಾರಿಕೆ ಸಲ್ಲಿಕೆಯಾಗಿದೆ. ಇಂದು ಬೆಳಗ್ಗೆ ಈಶ್ವರಪ್ಪ ಅತ್ಯಾಪ್ತ ಹಾಗೂ ಮಾಜಿ ಪಾಲಿಕೆ ಸದಸ್ಯ ವಿಶ್ವಾಸ್ ಅವರು ಈಶ್ವರಪ್ಪ ಪರವಾಗಿ ನಾಮಪತ್ರ ಸಲ್ಲಿಸಿದ್ದರು.

[pj-news-ticker]