ಮುಂಬಯಿ: ಅಪರಿಚಿತ ವ್ಯಕ್ತಿಗಳು ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಮುಂದೆ ಗುಂಡಿನ ದಾಳಿ ನಡೆಸಿ ಪರಾರಿ ಆಗಿರುವ ಘಟನೆ ಇಂದು ಮುಂಜಾನೆ ನಡೆದಿರುವುದು ವರದಿಯಾಗಿದೆ.
ಮುಂಜಾನೆ ಸುಮಾರು 4:51 ರ ವೇಳೆಗೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಮೂರು ಸುತ್ತ ಗುಂಡಿನ ದಾಳಿ ನಡೆಸಿ ಪರಾರಿ ಆಗಿದ್ದಾರೆ ವರದಿ ಆಗಿದೆ.
ಘಟನೆಯ ನಂತರ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಘಟನಾ ಸ್ಥಳಕ್ಕೆ ಕ್ರೈಂ ಬ್ರಾಂಚ್ ಮತ್ತು ಸ್ಥಳೀಯ ಪೊಲೀಸ್ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿವೆ.
ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ ಎಂದು ವರದಿ ಆಗಿದೆ.