ಬೆಂಗಳೂರು: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವುದು ಪಕ್ಷದ ವರಿಷ್ಠರು. ಈಶ್ವರಪ್ಪ ಅವರು ಸುಮ್ಮನೆ ನಮ್ಮ ಕುಟುಂಬದ ಮೇಲೆ ಆರೋಪಿಸುತ್ತಿದ್ದಾರೆ. ನಮ್ಮ ಕುಟುಂಬದ ಮೇಲೆ ಬಂದೂಕಿಟ್ಟು ಹೈಕಮಾಂಡ್‌ನತ್ತ ಗುಂಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ನಮ್ಮ ಪಕ್ಷದ ಹಿರಿಯ ಮುಖಂಡರು. ಅವರ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಬಾರದು ಎಂದುಕೊಂಡಿದ್ದೆ. ಆದರೆ ಈಗ ಮಾತನಾಡುವ ಅನಿವಾರ್ಯತೆ ಬಂದಿದೆ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವುದನ್ನು ಸಹಿಸಲು ಅವರಿಗೆ ಆಗುತ್ತಿಲ್ಲ.
ಕಾಂತೇಶ್‌ಗೆ ಟಿಕೆಟ್ ಸಿಕ್ಕಿಲ್ಲವೆಂಬ ಹತಾಶೆಯಲ್ಲಿ ಮಾತನಾಡುತ್ತಿದ್ದಾರೆ. ಯಡಿಯೂರಪ್ಪ ಸಾಕಷ್ಟು ಸವಾಲು ಎದುರುಸಿ ಹೋರಾಟ ಮಾಡಿದವರು. ಹಿಂದುತ್ವ ಮತ್ತು ಪಕ್ಷನಿಷ್ಠೆಯ ವಿಚಾರದಲ್ಲಿ ನಮ್ಮ ಕುಟುಂಬ ರಾಜಿಯಾದದ್ದಿಲ್ಲ ಎಂದು ಹೇಳಿದರು.