Spread the love

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಪರ ಪ್ರಚಾರದಲ್ಲಿ ನಿರತರಾಗಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚುನಾವಣೆ ನಿಮಿತ್ತ ನಿರಂತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದ ಕಾರಣ, ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ವಿಶ್ರಾಂತಿ ತೆಗೆದುಕೊಂಡು ಬಳಿಕ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗುವುದಾಗಿ ಮಾಹಿತಿ ನೀಡಿದ್ದಾರೆ.

ಅಷ್ಟೇ ಅಲ್ಲದೆ ಜೆಡಿಎಸ್​ ಪಕ್ಷದ ಕಾರ್ಯಕರ್ತರು, ಮುಖಂಡರು ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಶೀಘ್ರ ಗುಣಮುಖನಾಗುವೆ ಎನ್ನುವ ಸಂದೇಶ ನೀಡಿದ್ದಾರೆ.

ಶ್ವಾಸಕೋಶದ ಸೋಂಕು

ವಿಶ್ರಾಂತಿ ಇಲ್ಲದೆ ಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಅವರು ಈಗ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಅಂತೆಯೇ ಸಣ್ಣ ಪ್ರಮಾಣದಲ್ಲಿ ಲಂಗ್ಸ್​ ಇನ್ಫೆಕ್ಷನ್ ಹಾಗೂ ಡಸ್ಟ್​ ಅಲರ್ಜಿ ಕೂಡ ಇದೆ. ಇದಲ್ಲದೆ ಜ್ವರ ಕೂಡಾ ಬಂದಿರುವ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ, ಸ್ಪೆಷಲ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಮಣಿಪಾಲ್​ ಆಸ್ಪತ್ರೆಯ ಡಾ. ಸತ್ಯನಾರಾಯಣ್ ಅವರು ಎಚ್​ಡಿ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

Leave a Reply

Your email address will not be published. Required fields are marked *