ಚಿತ್ರದುರ್ಗ: ಸಚಿವ ಜಮೀರ್ ಅಹಮದ್ ಖಾನ್ ಆರೋಗ್ಯದಲ್ಲಿ ಧಿಡೀರ್ ಏರುಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ಚಿತ್ರದುರ್ಗ ಕಾಂಗ್ರೆಸ್ ಸಭೆಗೆ ಆಗಮಿಸುತ್ತಿದ್ದ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಎದೆ, ಬೆನ್ನು ನೋವಿನಿಂದ ಬಳಲಿದರು. ಕೂಡಲೇ ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಸವೇಶ್ವರ ಆಸ್ಪತ್ರೆಯಲ್ಲಿ ವೈದ್ಯ ಕಾರ್ತಿಕ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಇಸಿಜಿ, ಎಕೋ ಪರೀಕ್ಷೆ ನಡೆಸಲಾಗಿದೆ ಎಂದು ವರದಿಯಾಗಿದೆ.
ಜಮೀರ್ ಅಹಮದ್ ಖಾನ್ ಅವರು ತುಮಕೂರಲ್ಲಿ ಕಾಂಗ್ರೆಸ್ ಚುನಾವಣ ಪ್ರಚಾರ ಮುಗಿಸಿ ಚಿತ್ರದುರ್ಗಕ್ಕೆ ಬರುತ್ತಿದ್ದರು.