Breaking
Mon. Jun 17th, 2024

ನಟ ದ್ವಾರಕೀಶ್ ಪಂಚಭೂತಗಳಲ್ಲಿ ಲೀನ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!

By Mooka Nayaka News Apr 17, 2024
Spread the love

ಬೆಂಗಳೂರು: ನಿನ್ನೆ ಹೃದಯಾಘಾತದಿಂದ ನಿಧನರಾದ ನಟ ದ್ವಾರಕೀಶ್ ಅವರ ಅಂತ್ಯ ಸಂಸ್ಕಾರ ಇಂದು ನೆರವೇರಿದ್ದು, ದ್ವಾರಕೀಶ್ ಅವರ ಹಿರಿಯ ಮಗ ಯೋಗೇಶ್ ಅವರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ಚಾಮರಾಜಪೇಟೆಯ TR Mill ಹಿಂದೂ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ದ್ವಾರಕೀಶ್ ಅವರ ಹಿರಿಯ ಮಗ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ವೇಳೆ ಕುಟುಂಬದವರು ಹಾಗೂ ಆಪ್ತರು ಹಾಜರಿದ್ದರು. ಅಂತಿಮ ಸಂಸ್ಕಾರಕ್ಕೂ ಮೊದಲು ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವವಂದನೆ ನೀಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ದ್ವಾರಕೀಶ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ‘ನಾನು ದ್ವಾರಕೀಶ್ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್ನಲ್ಲಿ ಹೋಗಿದ್ವಿ, ಆ ಸಮಯದಲ್ಲಿ ಅನೇಕ ವಿಚಾರಗಳನ್ನ ಚರ್ಚೆ ಮಾಡಿದ್ವಿ ಎಂದು ಸಿಎಂ ಸಿದ್ದರಾಮಯ್ಯ ದ್ವಾರಕೀಶ್ ನೆನೆದು ಭಾವುಕರಾದರು.

ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದ ದ್ವಾರಕೀಶ್ ಅವರು ನಟನಾಗಿ, ನಿರ್ಮಾಪಕನಾಗಿ ಹಾಗೂ ನಿರ್ದೇಶಕನಾಗಿ ಅವರು ಹೆಸರು ಮಾಡಿದ್ದರು. ಸಾಕಷ್ಟು ಜನರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಖ್ಯಾತಿ ಅವರಿಗೆ ಇದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

 

Related Post