Breaking
Sat. Oct 12th, 2024

ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

By Mooka Nayaka News Apr 19, 2024
Spread the love

ಕಲಬುರಗಿ: ಕೊನೆಗೂ ಬಿಜೆಪಿ ತೊರೆದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ಅಫಜಲಪುರ ವಿಧಾನಸಭಾ ಕ್ಷೇತ್ರದಿಂದ ಆರು ಸಲ ಗೆದ್ದಿರುವ ಮಾಲೀಕಯ್ಯ ಗುತ್ತೇದಾರ ಕಳೆದ 2008 ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಈಗ ಮರಳಿ ಕಾಂಗ್ರೆಸ್ ಸೇರಿದ್ದಾರೆ.

ಈಗ ಪ್ರಮುಖವಾಗಿ ಸಹೋದರ, ‌ಜಿ.ಪಂ ಮಾಜಿ ಅಧ್ಯಕ್ಷ ನಿತೀನ ಗುತ್ತೇದಾರ ಬಿಜೆಪಿ ಸೇರ್ಪಡೆ ವಿರೋಧಿಸಿ ಕಾಂಗ್ರೆಸ್ ಸೇರಿದ್ದಾರೆ.

Related Post