ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂಬ ಕಾರಣಕ್ಕಾಗಿ ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಕೂಡ ಮೇ 20, 21ರಂದು ನಡೆಯಲಿರುವ ಸಿಇಟಿಗೆ ಹಾಜರಾಗಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ.
ಸಿಇಟಿ ಪರೀಕ್ಷೆಗೆ ಹಾಜರಾದರೆ ಮಾತ್ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಅಂಕಗಳನ್ನು ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ. ಆದ್ದರಿಂದ ಪೂರಕ ಪರೀಕ್ಷೆಯನ್ನು ಬರೆಯಲು ತೀರ್ಮಾನಿಸಿದ್ದರೂ ಸಿಇಟಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದಿದೆ.