ಚಿಕ್ಕಮಗಳೂರು : ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಜೆ.ಸಿ ಮಾಧುಸ್ವಾಮಿ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರು ಚಿಲ್ಲೆ ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ.
ಮಾಜಿ ಸಚಿವ ಮಾಧುಸ್ವಾಮಿ ಅವರು ಬಿರೂರು ಬಳಿ ಹಾಸನ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಈ ವೇಳೆ ಅವರಿದ್ದ ಕಾರು ಆಟೋವೊಂದಕ್ಕೆ ಢಿಕ್ಕಿಯಾಗಿದೆ.
ಸದ್ಯ ಘಟನೆಯಲ್ಲಿ ಯಾವುದೇ ಆಪಾಯ ಸಂಭವಿಸಿಲ್ಲ. ಇನ್ನು ಆಟೋ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.