Breaking
Mon. Oct 14th, 2024

ಬರ ಪರಿಹಾರ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಜಯ: ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

By Mooka Nayaka News Apr 23, 2024
Spread the love

ಬೆಂಗಳೂರು: ಬರ ಪರಿಹಾರ ಸಂಬಂಧ ಒಂದು ವಾರದೊಳಗೆ ಕ್ರಮ ಕೈಗೊಳ್ಳುವುದಾಗಿ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ತಿಳಿಸಿದ್ದು ಈ ರಾಜ್ಯ ಸರ್ಕಾರಕ್ಕೆ ಜಯ ಸಿಕ್ಕಂತಾಗಿದ್ದು ಈ ವಿಚಾರ ಕುರಿತು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿ ಸಿಎಂ ಸಿದ್ದರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,  ಒಂದು ವಾರದೊಳಗೆ ಬರ ಪರಿಹಾರ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ತಿಳಿಸಿದೆ. ಬರ ಪರಿಹಾರ ಬಿಡುಗಡೆಗೆ ಚುನಾವಣೆ ಆಯೋಗ ಸಮ್ಮತಿ ಸೂಚಿಸಿದೆ ಎಂದು ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಬರ ಪರಿಹಾರಕ್ಕಾಗಿ ಮನವಿ ಮಾಡಿ ಐದು ತಿಂಗಳು ಕಳೆದರೂ ಕೇಂದ್ರ ಸರ್ಕಾರ ಯಾವುದೇ ನಿರ್ಣಯ ಕೈಗೊಳ್ಳದೆ ನ್ಯಾಯಾಲಯ ಮೆಟ್ಟಿಲೇರುವ ಅನಿವಾರ್ಯ ಸೃಷ್ಟಿಸಿತ್ತು. ಇದು ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರವನ್ನ ಕೊಡಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ ಎಂದು ಟ್ವಟ್ಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Related Post