ಚಿತ್ರದುರ್ಗ: ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಅವರಿಗೆ ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದ್ದು, ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ನೀಡಿದೆ.
ಜೊತೆಗೆ ವಿಶೇಷ ಕೋರ್ಟ್ ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ‘ಸುಪ್ರೀಂ’ ಆದೇಶಿಸಿದೆ. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು.