Breaking
Mon. Jun 17th, 2024

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

By Mooka Nayaka News Apr 24, 2024
Spread the love

ಬೆಂಗಳೂರು : ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು.

ಕೆಯುಡಬ್ಲೂಜೆ ಸಂತಾಪ:

ಹಿರಿಯ ಪತ್ರಕರ್ತರದ ಅರ್ಜುನ್ ದೇವ್‌ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪ್ರಜಾವಾಣಿ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಸಲ್ಲಿಸಿದ್ದ ಸೇವೆ ಅನನ್ಯವಾದದ್ದು. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ.

ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ್ ಅವರ ನಿಧನದಿಂದ ಸುದ್ದಿಮನೆಗೆ ತುಂಬಲಾರದ ನಷ್ಟವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಶೋಕಿಸಿದ್ದಾರೆ.

 

Related Post