Breaking
Mon. Jun 17th, 2024

ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

By Mooka Nayaka News Apr 25, 2024
Spread the love

ಪಾಟ್ನಾ: ಹೋಟೆಲ್ ವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಮಂದಿ ಸಜೀವ ದಹನಗೊಂಡಿರುವ ಘಟನೆ ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪ ಗುರುವಾರ ಸಂಭವಿಸಿದೆ ಎಂದು ಹೇಳಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ಬೆಳಿಗ್ಗೆ ಸುಮಾರು ಹತ್ತು ಗಂಟೆಯ ಸುಮಾರಿಗೆ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಅವಘಡದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಘಟನೆಯಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಜೊತೆಗೆ ರಕ್ಷಣಾ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಹೇಳಲಾಗಿದೆ.

ಸದ್ಯ ಬೆಂಕಿ ಹತೋಟಿಗೆ ಬಂದಿದ್ದು, ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದ್ದು ತನಿಖೆಯ ಬಳಿಕವೇ ಸ್ಪಷ್ಟ ಚಿತ್ರಣ ಬೆಳಕಿಗೆ ಬರಬೇಕಾಗಿದೆ.

Related Post