Breaking
Sat. Oct 12th, 2024

ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

By Mooka Nayaka News May 27, 2024
Spread the love

ಶಿವಮೊಗ್ಗ: ಸರಕಾರಿ ನೌಕರರೊಬ್ಬರು ಡೆತ್ ನೋಟ್ ಬರೆದಿತ್ತು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದಲ್ಲಿ ಬೆಳಕಿಗೆ ಬಂದಿದೆ.

ಚಂದ್ರಶೇಖರನ್ (50 ) ಆತ್ಮಹತ್ಯೆ ಮಾಡಿಕೊಂಡ ನೌಕರ. ಸಮಾಜ ಕಲ್ಯಾಣ ಇಲಾಖೆಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧೀಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಅವರು ತಮ್ಮ ನಿವಾಸದಲ್ಲೇ ಡೆತ್ ನೋಟ್ ಬರೆದಿತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಇಲಾಖಾ ಅಧಿಕಾರಿಗಳು ಹಣ ವರ್ಗಾವಣೆ ಮಾಡಲು ಒತ್ತಡ ಹಾಕಿರುವ ಕುರಿತು ಉಲ್ಲೇಖಿಸಲಾಗಿದೆ.

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related Post