Breaking
Mon. Oct 14th, 2024

ಈ ಬಾರಿ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

By Mooka Nayaka News May 29, 2024
Spread the love

ಮೈಸೂರು: ಕಳೆದ ವರ್ಷವೇ ಶಾಲಾ ಪಠ್ಯಪುಸ್ತಕ ಪರಿಷ್ಕರಿಸಲಾಗಿದ್ದು, ಈ ವರ್ಷ ಯಾವುದೇ ಮುಖ್ಯ ಬದಲಾವಣೆಯಿಲ್ಲ. ಕೆಲವು ಪದ ಹಾಗೂ ವಾಕ್ಯಗಳಲ್ಲಷ್ಟೇ ಬದಲಾವಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷ್ಕೃತ ಪಠ್ಯಪುಸ್ತಕಗಳು ವೆಬ್‌ಸೈಟ್‌ನಲ್ಲಿ ಲಭ್ಯವಿವೆ. ಶೇ 95ರಷ್ಟು ಪಠ್ಯಪುಸ್ತಕಗಳು ಈಗಾಗಲೇ ಶಾಲೆಗಳಿಗೆ ತಲುಪಿವೆ ಎಂದರು.

ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆ. ಕೋವಿಡ್‌ ನಂತರ ಶಾಲಾ ಮಕ್ಕಳಿಗೆ ಬೈಸಿಕಲ್‌ ಸಿಕ್ಕಿಲ್ಲ. ಈ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಸರ್ಕಾರ ಸಂಪುಟದಲ್ಲಿ ಚರ್ಚಿಸಿ ವಿತರಿಸಲು ನಿರ್ಧರಿಸಲಾಗುವುದು ಎಂದು ಮಾಹಿತಿ ನೀಡಿದರು.

Related Post