Spread the love

ನವದೆಹಲಿ: ವಿವಾಹ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ನ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ ಸೋಮವಾರ (ಮೇ 1) ಮಹತ್ವದ ತೀರ್ಪನ್ನು ಪ್ರಕಟಿಸಿದೆ.

ಕೌಟುಂಬಿಕ ನ್ಯಾಯಾಲಯಕ್ಕೆ ಒಪ್ಪಿಸದೇ ಪರಸ್ಪರ ಸಮ್ಮತಿ ದಂಪತಿಯು ಇನ್ನು ಮುಂದೆ ಆರು ತಿಂಗಳ ಕಾಲ ಕಾಯದೇ ವಿಚ್ಛೇದನ ಪಡೆಯಬಹುದಾಗಿದೆ ಎಂದು ಸಾಂವಿಧಾನಿಕ ಪೀಠದ ಜಸ್ಟೀಸ್‌ ಎಸ್.ಕೆ.ಕೌಲ್‌ ಅವರನ್ನೊಳಗೊಂಡ ಪೀಠ ಮಹತ್ವದ ತೀರ್ಪನ್ನು ನೀಡಿದೆ.

ವಿಚ್ಛೇದನಕ್ಕೆ ಸಂಬಂಧಿಸಿದಂತೆ ಕೌಟುಂಬಿಕ ನ್ಯಾಯಾಲಯ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನಕ್ಕೆ ಆರು ತಿಂಗಳ ಕಾಲಾವಕಾಶ ನೀಡುತ್ತಿತ್ತು. ಸಂವಿಧಾನದ 142ನೇ ವಿಧಿಯು ಬಾಕಿ ಇರುವ ವಿಚ್ಛೇದನ ಪ್ರಕರಣಗಳಲ್ಲಿ ಮದುವೆಯನ್ನು ರದ್ದುಗೊಳಿಸುವ ಪರಮಾಧಿಕಾರವನ್ನು ಸುಪ್ರೀಂಕೋರ್ಟ್‌ ಗೆ ನೀಡುತ್ತದೆ.

ಈ ಕುರಿತು ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್‌ 2022ರ ಸೆಪ್ಟೆಂಬರ್‌ 29ರಂದು ಪೂರ್ಣಗೊಳಿಸಿ, ತೀರ್ಪನ್ನು ಕಾಯ್ದಿರಿಸಿತ್ತು. ಈ ಅರ್ಜಿಗಳನ್ನು ಸುಪ್ರೀಂಕೋರ್ಟ್‌ ಸಾಂವಿಧಾನಿಕ ಪೀಠದ ಜಸ್ಟೀಸ್‌ ಗಳಾದ ಸಂಜಯ್‌ ಕಿಶನ್‌ ಕೌಲ್‌, ಸಂಜೀವ್‌ ಖನ್ನಾ, ಎಎಸ್‌ ಓಕಾ, ವಿಕ್ರಮ್‌ ನಾಥ್‌ ಮತ್ತು ಜೆ.ಕೆ.ಮಹೇಶ್ವರಿ ವಿಚಾರಣೆ ನಡೆಸಿದ್ದರು.

 

 

Leave a Reply

Your email address will not be published. Required fields are marked *