Spread the love

ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸರಿಯಾಗಿ ಒಂದು ವಾರ ಮಾತ್ರ ಬಾಕಿಯಿದೆ. ಮತದಾನದ ದಿನಾಂಕ ಹತ್ತಿರ ಬರುತ್ತಿದ್ದಂತೆ ರಾಜ್ಯದ ಹಲವೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಅದರಂತೆ ಮೈಸೂರಿನಲ್ಲೂ ಬುಧವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಗಿಡದಲ್ಲಿ ಬಚ್ಚಿಟ್ಟಿದ್ದ ಕಂತೆ ಕಂತೆ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂಬ ಮಾಹಿತಿ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಸಹೋದರ ಕೆ ಸುಬ್ರಹ್ಮಣ್ಯ ರೈ ಅವರ ಮೈಸೂರಿನ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಮನೆ ಮುಂದಿನ ಆರ್ಟಿಫಿಶಿಯಲ್ ಟ್ರೀ ಮೇಲೆ ನೇತು ಹಾಕಲಾಗಿದ್ದ 1 ಕೋಟಿ ರೂಪಾಯಿ ನಗದು ಹಣ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸುಬ್ರಹ್ಮಣ್ಯ ರೈ ಅವರು ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಜೊತೆ ಸಾಕಷ್ಟು ಒಡನಾಟ ಹೊಂದಿದ್ದರು ಎನ್ನಲಾಗಿದೆ. ಇವರ ಮೈಸೂರಿನಲ್ಲಿರುವ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಅವರ ಮನೆಯಲ್ಲಿ ಶೋಧಕಾರ್ಯ ನಡೆಸಿದ್ದಾರೆ. ಈ ವೇಳೆ ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ಬ್ಯಾಗ್ ಒಂದು ನೇತು ಹಾಕಲಾಗಿತ್ತು.

ಅದನ್ನು ತೆಗೆದು ಪರಿಶೀಲಿಸಿದ ಅಧಿಕಾರಿಗಳು ಶಾಕ್ ಆಗಿದ್ದಾರೆ. ಯಾಕೆಂದರೆ ಅದರಲ್ಲಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಹಣ ಇತ್ತು. ಬಳಿಕ ಪರಿಶೀಲನೆ ನಡೆಸಿದ ಐಟಿ ಅಧಿಕಾರಿಗಳು ಕ್ಯಾಶ್ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *