Trending

ಬೆಂಗಳೂರು ರೇವ್ ಪಾರ್ಟಿ ಪ್ರಕರಣ; ನಟಿ ಹೇಮಾ ಬಂಧನ

Spread the love

ಬೆಂಗಳೂರು:  ಇತ್ತೀಚೆಗೆ ಸಂಚಲನ ಮೂಡಿಸಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ನಟಿ ಹೇಮಾ ಅವರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಪೊಲೀಸರ ಅಧಿಕೃತ ಪ್ರಕಟಣೆಯ ಹೊರತಾಗಿಯೂ, ಪಾರ್ಟಿಯಲ್ಲಿ ಭಾಗವಹಿಸಿಲ್ಲ ಎಂದು ಹೇಮಾ ಹೇಳಿಕೊಂಡಿದ್ದರು. ರಕ್ತದ ಮಾದರಿಗಳನ್ನು ತೆಗೆದುಕೊಂಡು ಹೇಮಾ ಡ್ರಗ್ಸ್ ಸೇವಿಸಿದ್ದಾರೆ ಎಂಬ ಪಾಸಿಟಿವ್ ವರದಿ ಬಂದ ನಂತರ ಬೆಂಗಳೂರು ಪೊಲೀಸರು ಆಕೆಗೆ ನೋಟಿಸ್ ಜಾರಿ ಮಾಡಿದ್ದರು.

ಹೇಮಾ ಬೆಂಗೂರು ಪೊಲೀಸರ ವಿಚಾರಣೆಗೆ ಹಾಜರಾಗಿರಲಿಲ್ಲ. ಹೇಮಾ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು. ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.

ಮೊದಲ ಬಾರಿಗೆ ನೀಡಿದ ನೋಟಿಸ್‌ಗೆ ಅನಾರೋಗ್ಯದ ಕಾರಣ ಹಾಜರಾಗಲು ಸಾಧ್ಯವಿಲ್ಲ ಎಂದು ಹೇಮಾ ಪತ್ರ ಕಳುಹಿಸಿದ್ದರು. ಎರಡನೇ ಬಾರಿಗೆ ನೋಟಿಸ್ ಜಾರಿ ಮಾಡಿದ ನಂತರ ಇಂದು ಬೆಂಗಳೂರು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಸದ್ಯ ಹೇಮಾ ಅವರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

[pj-news-ticker]