ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ 8ನೇ ಸುತ್ತಿನ ಮತ ಎಣಿಕೆಯ ಅಂತ್ಯಕ್ಕೆ 84168 ಮತಗಳ ಭರ್ಜರಿ ಮುನ್ನಡೆ ಸಾಧಿಸಿದೆ.
ಕ್ಷೇತ್ರದಲ್ಲಿ 600838 ಮತಗಳ ಎಣಿಕೆ ಕಾರ್ಯ ನಡೆದಿದ್ದು, ಬಿಜೆಪಿ- 334178, ಕಾಂಗ್ರೆಸ್- 250010 ಮತಗಳನ್ನು ಪಡೆದಿದೆ.
ಭಾರೀ ಹಿನ್ನಡೆ ಅನುಭವಿಸಿದ ನಂತರ ಕಾಂಗ್ರೆಸ್ ಅಭ್ಯರ್ಥಿ ಸಚಿವೆ ಲಕ್ಷ್ಮಿ ಹೆಬ್ಬಾಳ್ ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳಕರ್ ಅವರು ನಿರಾಸೆಯಿಂದ ಕಣ್ಣು ಒರೆಸಿಕೊಳ್ಳುತ್ತ ಮತ ಎಣಿಕೆ ಕೇಂದ್ರದಿಂದ ಹೊರ ಬಂದಿದ್ದಾರೆ.
ಇನ್ನೊಂದೆಡೆ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಲು ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ.