Spread the love

ಇಂಫಾಲ್: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರವನ್ನು ನಿಯಂತ್ರಿಸಲು ಕೇಂದ್ರ ಸಹಾಯ ಮಾಡುವಂತೆ ಬಾಕ್ಸಿಂಗ್ ಪಟು ಎಂ.ಸಿ ಮೇರಿ ಕೋಮ್ ಗುರುವಾರ ಒತ್ತಾಯಿಸಿದ್ದಾರೆ.

ಈಶಾನ್ಯ ರಾಜ್ಯದಲ್ಲಿ ಬುಡಕಟ್ಟು ಜನಾಂಗದವರ ಆಂದೋಲನದ ವೇಳೆ ಹಿಂಸಾಚಾರ ಭುಗಿಲೆದ್ದ ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್‌ ಗಳನ್ನು ನಿಯೋಜಿಸಲಾಗಿತ್ತು.

“ನನ್ನ ರಾಜ್ಯ ಮಣಿಪುರ ಉರಿಯುತ್ತಿದೆ, ದಯವಿಟ್ಟು ಸಹಾಯ ಮಾಡಿ” ಎಂದು ಹಿರಿಯ ಬಾಕ್ಸರ್ ಮೇರಿ ಕೋಮ್ ಟ್ವೀಟ್ ಮಾಡಿದ್ದಾರೆ. ಹಿಂಸಾಚಾರದ ಫೋಟೋಗಳನ್ನು ಹಂಚಿಕೊಂಡ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ಬುಡಕಟ್ಟು ಜನಾಂಗದವರಲ್ಲದ ಮೀಟೈಸ್ ಸಮುದಾಯದ ಪರಿಶಿಷ್ಟ ಪಂಗಡದ ಸ್ಥಾನಮಾನದ ಬೇಡಿಕೆಯನ್ನು ವಿರೋಧಿಸಿ ಬುಧವಾರ ಆಲ್ ಟ್ರೈಬಲ್ ಸ್ಟೂಡೆಂಟ್ ಯೂನಿಯನ್ ಮಣಿಪುರ (ATSUM) ಚುರಾಚಂದ್‌ಪುರ ಜಿಲ್ಲೆಯ ಟೋರ್ಬಂಗ್ ಪ್ರದೇಶದಲ್ಲಿ ‘ಬುಡಕಟ್ಟು ಐಕ್ಯತಾ ಮೆರವಣಿಗೆ’ಗೆ ಕರೆ ನೀಡಿತ್ತು. ಪೊಲೀಸರ ಪ್ರಕಾರ, ಸಾವಿರಾರು ಜನರು ರ‍್ಯಾಲಿಯಲ್ಲಿ ಭಾಗವಹಿಸಿದ್ದರು, ಈ ಸಂದರ್ಭದಲ್ಲಿ ಆದಿವಾಸಿಗಳು ಮತ್ತು ಬುಡಕಟ್ಟು ಜನಾಂಗದವರ ನಡುವೆ ಹಿಂಸಾಚಾರ ಭುಗಿಲೆದ್ದಿದೆ.

ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಸಶಸ್ತ್ರ ಪಡೆಗಳು ಹಿಂಸಾಚಾರದ ನಂತರ ರಾಜ್ಯದ ವಿವಿಧ ಪ್ರದೇಶಗಳಲ್ಲಿ 7,500 ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಸೇನಾ ಶಿಬಿರಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ಆಶ್ರಯ ನೀಡಿದೆ.

 

 

Leave a Reply

Your email address will not be published. Required fields are marked *